
ಪ್ರಗತಿವಾಹಿನಿ ಸುದ್ದಿ; ಬೆಳಗಾವಿಯಲ್ಲಿ ವೈದ್ಯನೊಬ್ಬನ ಮನೆಯಲ್ಲಿ ಗಾಂಜಾ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ವೈದ್ಯರನ್ನು ಬಂಧಿಸಲಾಗಿದೆ.
ವೃತ್ತಿಯಿಂದ ವೈದ್ಯರಾಗಿದ್ದ ರಾಹುಲ್ ಬಂಟಿ ಗಾಂಜಾ ಸೇವನೆ ಮಾಡಿ ರೋಗಿಗಳ ತಪಾಸಣೆ ನಡೆಸುತ್ತಿದ್ದರೇ ಎಂಬ ಪ್ರಶ್ನೆಯೂ ಎದುರಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈತನ ಮನೆಯಿಂದ 134 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳಗಾವಿಯ ಮಾಳಮಾರುತಿ ಪೊಲೀಸರು ಶನಿವಾರ ರಾಹುಲ್ ಬಂಟಿ ಮನೆಗೆ ನುಗ್ಗಿ ಆತನ ಬೆಡ್ ರೂಮ್ ನಲ್ಲಿ ಬಚ್ಚಿಟ್ಟಿದ್ದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ರಾಹುಲ್ ವಿಠಲ್ ಬಂಟಿ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


