Kannada NewsKarnataka NewsLatestTravel

*ಪ್ರಯಾಣಿಕರ ಗಮನಕ್ಕೆ: ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಮಾರಿಕಾಂಬಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ಯಶವಂತಪುರ–ಶಿವಮೊಗ್ಗ ನಡುವೆ ಸಂಚರಿಸುವ ವೀಕ್ಲಿ ಎಕ್ಸ್ ಪ್ರೆಸ್ ರೈಲನ್ನು ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಿದೆ.

ಮಾರ್ಚ್ 1ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16581 ಶಿವಮೊಗ್ಗದ ಬದಲಾಗಿ ತಾಳಗುಪ್ಪದವರೆಗೆ ಸಂಚರಿಸಲಿದೆ. ಬಳಿಕ ರೈಲು ಸಂಖ್ಯೆ 16582 ಶಿವಮೊಗ್ಗಕ್ಕೆ ಬದಲಾಗಿ ತಾಳಗುಪ್ಪದಿಂದಲೇ ಪ್ರಯಾಣವನ್ನು ಆರಂಭಿಸಲಿದೆ. ಈ ವಿಸ್ತರಣೆಯು ಕೇವಲ ಒಂದು ಟ್ರಿಪ್​ಗೆ ಮಾತ್ರ ಅನ್ವಯಿಸಲಿದೆ.

ರೈಲು ಸಂಖ್ಯೆ 16581 ಯಶವಂತಪುರದಿಂದ ಮಧ್ಯರಾತ್ರಿ 12:15ಕ್ಕೆ ಹೊರಟು, ಅಂದು ಬೆಳಗ್ಗೆ 09:00 ಗಂಟೆಗೆ ತಾಳಗುಪ್ಪ ತಲುಪಲಿದೆ. ಅಂದೇ ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 16582 ತಾಳಗುಪ್ಪದಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 04:45ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲು ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button