Latest

ರಾಗಿಣಿ ಜತೆಗೆ ಗೋವಾದಲ್ಲಿದ್ದ ಕೈ ಮುಖಂಡ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣದಲ್ಲಿ ರಾಜಕೀಯ ಮುಖಂಡರು ಭಾಗಿಯಾಗಿದ್ದಾರೆ ಎಂಬುದಕ್ಕೆ ಹಲವಾರು ಸಾಕ್ಷ್ಯಗಳು ಸಿಸಿಬಿಗೆ ಲಭ್ಯವಾಗಿವೆ. ಡ್ರಗ್ಸ್ ಪ್ರಕರಣಕ್ಕೆ ಹುಬ್ಬಳ್ಳಿಯ ನಂಟಿರುವುದೂ ಬಯಲಾಗಿದ್ದು, ಕಾಂಗ್ರೆಸ್ ನ ಇನ್ನೋರ್ವ ಮುಖಂಡ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.

ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಮೊಬೈಲ್ ನಲ್ಲಿ ಹಲವು ಮಾಹಿತಿಗಳು ಲಭ್ಯವಾಗಿದ್ದು, ನಟಿ ರಾಗಿಣಿ ಜತೆಗೆ ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ  ಗೋವಾದಲ್ಲಿರುವ ಫೋಟೋಗಳು ಸಿಕ್ಕಿವೆ. ಅವರು ಗೋವಾದಲ್ಲಿ ಕ್ಯಾಸಿನೋ ಟೇಬಲ್ ಖರೀದಿಸಿದ್ದರು ಎನ್ನಲಾಗಿದೆ.

Home add -Advt

ರಾಗಿಣಿ ಮೊಬೈಲ್ ನಲ್ಲಿ ಸಿಕ್ಕ ಮಾಹಿತಿ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಕಾಂಗ್ರೆಸ್ ಮುಖಂಡನ ಹುಬ್ಬಳ್ಳಿಯ ಉಣಕಲ್ ನಿವಾಸದ ಮೇಲೆ ದಾಳಿ ನಡೆಸಿ,  ಕಾಂಗ್ರೆಸ್ ಮುಖಂಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button