ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಬೆಂಗಳೂರು ಮೂಲದ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದು, ಅವರ ಪಾರ್ಥಿವಶರೀರ ಬೆಂಗಳೂರಿಗೆ ಆಗಮಿಸಿದೆ.
ಬೆಂಗಳೂರು ನಗರ ಜಿಲ್ಲೆಯ ಅನೆಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ಗಣ್ಯರು ಹುತಾತ್ಮ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಗೆಹ್ಲೋಟ್, ಸಂಸದ ಡಿ.ಕೆ.ಸುರೇಶ್, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಗಣ್ಯರು ಕ್ಯಾ.ಪ್ರಾಂಜಲ್ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿದರು.
ಅಂತಿಮ ದರ್ಶನದ ಬಳಿಕ ನಂದನವನ ಬಡಾವಣೆ ನಿವಾಸದಿಂದ ತೆರೆದ ವಾಹನದಲ್ಲಿ ಪಾರ್ಥಿವಶರೀರದ ಮೆರವಣಿಗೆ ಸಾಗಿದ್ದು, ಕಲ್ಲುಬಾಳು ರಸ್ತೆ ಮೂಲಕ ಜಿಗಣಿ, ಹರಪ್ಪನಹಳ್ಳಿ, ಕೊಪ್ಪಗೇಟ್, ಬೇಗಿಹಳ್ಳಿ, ಬನ್ನೇರುಘಟ್ಟ ರಸ್ತೆ, ನೈಸ್ ರಸ್ತೆ, ಕೂಡ್ಲು ಗೇಟ್ ಮೂಲಕ ಸಾಗಿ ಸೋಮಸುಂದರಪಾಳ್ಯ ವಿದ್ಯುತ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ