Latest

*ಮತದಾನದ ವೇಳೆ ರಣಾಂಗಣವಾದ ಮಸಬಿನಾಳ; ಮತಯಂತ್ರಗಳನ್ನೇ ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಧಾನಸಭಾ ಚುನಾವಣಾ ಮತದಾನ ಒಂದೆಡೆ ಬಿರುಸುಗೊಂದಿದ್ದು, ಇನ್ನೊಂದೆಡೆ ವಿಜಯಪುರದ ಮಸಬಿನಾಳ ಗ್ರಾಮ ರಣಾಂಗಣವಾಗಿ ಮಾರ್ಪಟ್ಟಿದೆ.

ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ರಸ್ತೆಗೆ ಬಡಿದು, ಪುಡಿ ಪುಡಿ ಮಾಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಧಿಕಾರಿಗಳು ಕಾಯ್ದಿರಿಸಿದ್ದ ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ಕೊಂಡೊಯ್ಯುತ್ತಿದ್ದು. ಈ ವೇಳೆ ಮತದಾನ ಪ್ರಕ್ರಿಯೆಯನ್ನು ಅಧಿಕಾರಿಗಳು ಅರ್ಧಕ್ಕೆ ಸ್ಥಗಿತಗೊಳುಸುತ್ತಿದ್ದಾರೆ ಎಂದು ಗ್ರಾಮಸ್ಥರು ತಪ್ಪಾಗಿ ಭಾವಿಸಿ ಅಧಿಕಾರಿಗಳ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

Home add -Advt

ಅಧಿಕಾರಿಗಳ ವಾಹನವನ್ನು ಅಡ್ಡಗಟ್ಟಿ ವಾಹನವನ್ನು ಕೆಡವಿ ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ಕಸಿದು ಅವುಗಳನ್ನು ಒಡೆದುಹಾಕಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

https://pragati.taskdun.com/belagavi-an-elderly-woman-died-in-the-polling-booth/


Related Articles

Back to top button