ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಮಹಾಮಾರಿಯ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೆಸರಿನ ಲಕ್ಷ್ಮಿ ತಾಯಿ ಫೌಂಡೇಶನ್, ಮಂಗಳವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ, ಮಾರಿಹಾಳ ಹಾಗೂ ಮೊದಗಾ ಗ್ರಾಮಗಳಲ್ಲಿ ವಿವಿಧ ಸಾಮಗ್ರಿಗಳನ್ನು ವಿತರಿಸಿತು.
ಯುವಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು, ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ತೋಸಿಪ್ ಫನಿಬಂದ ಹಾಗೂ ಕಾರ್ಯಕರ್ತರು ಕೊರೊನಾ ವೈರಸ್ (COVID19) ಬಗ್ಗೆ ಜನ ಜಾಗ್ರತಿ ಅಭಿಯಾನ ನಡೆಸಿದರು.
ನಂತರ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಬಾಟಲ್ ಗಳನ್ನು ವಿತರಿಸಿ ಕೊರೊನ ಸೋಂಕಿನ ಬಗ್ಗೆ ಮುಂಜಾಗ್ರತೆಯ ಕ್ರಮಗಳನ್ನು ತೆಗೆದುಕೊಳ್ಳಲು ಜನರಿಗೆ ವಿನಂತಿಸಿದರು.
ಎಷ್ಟೇ ಕಷ್ಟವೆನಿಸಿದರೂ ಜನರು ಮನೆಯಿಂದ ಹೊರಗೆ ಬರದೆ ಕೊರೋನಾ ರೋಗ ಹರಡದಂತೆ ಕಾಳಜಿವಹಿಸಬೇಕು. ಎಲ್ಲಕ್ಕಿಂತ ಜೀವ ಮುಖ್ಯ. ಹಾಗಾಗಿ ನಿಮ್ಮ ಹಾಗೂ ನಿಮ್ಮ ಕುಟುಂಬದ ರಕ್ಷಣೆಗಾಗಿ ಜನರು ಮನೆಯಲ್ಲೇ ಇರಬೇಕು ಎಂದು ಚನ್ನರಾಜ ಹಟ್ಟಿಹೊಳಿ ಜನರಲ್ಲಿ ವಿನಂತಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ