
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಲು ಅವಕಾಶವಿಲ್ಲದಿದ್ದರೂ ಬೆಂಗಳೂರಿನ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಹೊಸ ವಿವಾದ ಸೃಷ್ಠಿಯಾಗಿದೆ.
ಮೆಕ್ಕಾಗೆ ತೆರಳುತ್ತಿದ್ದವರನ್ನು ಬಿಳ್ಕೊಡಲು ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಅವರನ್ನು ಕಳುಹಿಸಿ ವಾಪಸ್ ಬರುವ ವೇಳೆ ಟರ್ಮಿನಲ್ 2 ರಲ್ಲಿ ಸಾರ್ವಜನಿಕವಾಗಿ ನಮಾಜ್ ಮಾಡಿದ್ದಾರೆ.
ಸಾಮೂಹಿಕ ನಮಾಜ್ ನಡೆಯುತ್ತಿದ್ದರೂ ಸಿಬ್ಬಂದಿ ನೋಡುತ್ತಾ ಮೌನವಾಗಿದ್ದರು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ ನಿಲ್ದಾಣ ಆಡಳಿತದಿಂದ ಈ ಬಗ್ಗೆ ಇನ್ನಷ್ಟೇ ಅಧಿಕೃತ ಪ್ರತಿಕ್ರಿಯೆ ದೊರೆಯಬೇಕಿದೆ.
ಇನ್ನು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಆರ್ ಎಸ್ ಎಸ್ ಮೆರವಣಿಗೆ ಅನುಮತಿ ನಿರಾಕರಿಸುತ್ತಿದ್ದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಯಾಕೆ ಗಮನ ಹರಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.




