
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಾರ್ಚ್ 24 ರಂದು ಸಿ.ಪಿ.ಎಡ್ ಮೈದಾನದಲ್ಲಿ ಸಾಮೂಹಿಕವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
“ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಹಕ್ಕುಗಳು, ಸಮಾನತೆ ಹಾಗೂ ಸಬಲೀಕರಣಕ್ಕಾಗಿ ತ್ವರಿತ ಕಾರ್ಯಕ್ರಮ ಏರ್ಪಡಿಪಾಗಿದ್ದು, 3 ಸಾವಿರ ಗರ್ಭಿಣಿಯರಿಗೆ(ಉಡಿ ತುಂಬುವ) ಸೀಮಂತ ಕಾರ್ಯಕ್ರಮ ನಡೆಯಲಿದೆ.
ಅದೇ ರೀತಿಯಲ್ಲಿ ಅಂಗವಿಕಲರಿಗೆ ಸಾಧನ ಸಲಕರಣೆಗಳ ವಿತರಣೆ, ಬೈಲ್ ಲಿಪಿ, ಲ್ಯಾಪ್ ಟಾಪ್, ಬೈಲ್ ವಾಚ್, ಹೋಲಿಗೆ ಯಂತ್ರ ಹಾಗೂ ಸ್ಕೂಟರ್ ವಿತರಿಸಲಾಗುವುದು.
ಮಗು ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮ, ಭಾಗ್ಯಲಕ್ಷ್ಮಿ ಯೋಜನೆಯ ಸುಕನ್ಯಾ ಸಮೃದ್ಧಿ 5 ಫಲಾನುಭವಿಗಳಿಗೆ ಪಾಸ್ ಬುಕ್ ವಿತರಣೆ, ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆಗೆ ಹಾಗೂ ಅತ್ಯುತ್ತಮ ಸ್ತ್ರೀ ಶಕ್ತಿ ಸಂಘದವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗುವುದು. ಸ್ತ್ರೀ ಶಕ್ತಿ ಗುಂಪುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಉದ್ಘಾಟನೆ ಮಾರ್ಚ್ 24 ರಿಂದ ಮಾ.28 ರವರೆಗೆ 5 ದಿನಗಳ ಕಾಲ ನಡೆಯಲಿದೆ. (ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ ತಿನಿಸುಗಳ ವ್ಯಾಪಾರ, ಲಂಬಾನಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗಗಳು ಇತ್ಯಾದಿ ವಸ್ತುಗಳ ಪ್ರದರ್ಶನ) ಅದೇ ರೀತಿಯಲ್ಲಿ ವಿಶೇಷ ಸಾಧಕಿ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.