
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ನವದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಎಲ್ಲೆಂದರಲ್ಲಿ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ.
ಪ್ರಾಥಮಿಕ ಮಾಹಿತಿ ಪ್ರಕಾರ 10ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಂಜೆ 7 ಗಂಟೆ ಹೊತ್ತಿಗೆ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ದೆಹಲಿ ಸ್ಫೋಟದ ಕುರಿತು ತನಿಖೆ ಆರಂಭವಾಗಿದೆ. ಘಟನೆ ಕುರಿತು ಕೇಂದ್ರ ಗೃಹ ಸಚಿವರು ಮಾಹಿತಿ ಪಡೆಯುತ್ತಿದ್ದಾರೆ. ಉಗ್ರರ ಕೈವಾಡವಿರಬಹುದೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.



