*ದೆಹಲಿಯಲ್ಲಿ ಭೀಕರ ಸ್ಫೋಟ: ; ಚಲ್ಲಾಪಿಲ್ಲಿಯಾದ ದೇಹಗಳು*
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ನವದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಎಲ್ಲೆಂದರಲ್ಲಿ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಪ್ರಾಥಮಿಕ ಮಾಹಿತಿ ಪ್ರಕಾರ 10ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಂಜೆ 7 ಗಂಟೆ ಹೊತ್ತಿಗೆ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿ ಸ್ಫೋಟದ ಕುರಿತು ತನಿಖೆ ಆರಂಭವಾಗಿದೆ. ಘಟನೆ ಕುರಿತು ಕೇಂದ್ರ ಗೃಹ ಸಚಿವರು ಮಾಹಿತಿ ಪಡೆಯುತ್ತಿದ್ದಾರೆ. ಉಗ್ರರ ಕೈವಾಡವಿರಬಹುದೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.
Copy and paste this URL into your WordPress site to embed
Copy and paste this code into your site to embed