Kannada NewsKarnataka NewsLatest

ಬೆಳಗಾವಿಯಲ್ಲಿ ಶನಿವಾರ ಬೃಹತ್ ಸಮಾವೇಶ: ಸ್ಥಳ ಪರಿಶೀಲಿಸಿದ ಅಂಗಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ ಠಾಕೂರ್ ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ನಗರದ ಸರದಾರ್ ಹೈಸ್ಕೂಲ್ ಮೈದಾನದಲ್ಲಿ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡುವರು.

ಬಿಜೆಪಿ ಜಿಲ್ಲಾಧ್ಯಕ್ಷ ವಿಶ್ವನಾಥ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಬೆಳಗ್ಗೆ 11 ಗಂಟೆಗೆ ಸಮಾವೇಶ ನಡೆಯಲಿದ್ದು, 10 ಸಾವಿರಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳುವರು ಎಂದು ತಿಳಿಸಿದರು. ಕೇಂದ್ರ ಸಚಿವ ಸುರೇಶ ಅಂಗಡಿ, ಸ್ಥಳೀಯ ಶಾಸಕರು ಭಾಗವಹಿಸುವರು.

 

ಸಂಜೆ 4ಗಂಟೆಗೆ ಚಿಕ್ಕೋಡಿಯಲ್ಲಿ 

ಶಾಸಕ ಅನಿಲ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ಪೌರತ್ಯ ಕಾಯ್ದೆ ಕುರಿತು ಅನಗತ್ಯವಾಗಿ ತಪ್ಪು ಪ್ರಚಾರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಎಲ್ಲ ಕಡೆ ಸಮಾವೇಶ ನಡೆಸುತ್ತಿದ್ದು, ಸಂಜೆ 4 ಗಂಟೆಗೆ ಚಿಕ್ಕೋಡಿಯಲ್ಲಿ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ರಾಜೇಂದ್ರ ಹರಕುಣಿ, ರಾಜು ಚಿಕ್ಕನಗೌಡರ್, ಗೂಳಪ್ಪ ಹೊಸಮನಿ, ಶಶಿಕಾಂತ‌ ಪಾಟೀಲ  ಮೊದಲಾದವರಿದ್ದರು.

ಸುರೇಶ ಅಂಗಡಿ ಪರಿಶೀಲನೆ

ಶನಿವಾರ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಶುಕ್ರವಾರ ರಾತ್ರಿ ಕೇಂದ್ರ ಸಚಿವ ಸುರೇಶ ಅಂಗಡಿ ಭೇಟಿ ನೀಡಿ ಪರಿಶೀಲಿಸಿದರು. ಸಿದ್ಧತೆಗಳ ಕುರಿತು ಕಾರ್ಯಕರ್ತರ ಜೊತೆ ಚರ್ಚಿಸಿ, ಸಲಹೆ ಸೂಚನೆ ನೀಡಿದರು. ರಾಜು ಚಿಕ್ಕನಗೌಡರ್, ಪ್ರಭು ಹೂಗಾರ್ ಮೊದಲಾದವರಿದ್ದರು.

Related Articles

Back to top button