
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 195.5 ರೂಪಾಯಿಗಳನ್ನು ಹೆಚ್ಚಿಸಲಾಗಿದೆ.
ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವ್ಯಾಪಾರ ಉದ್ದೇಶಗಳಿಗಾಗಿ ಬಳಸುವ ಸಿಲಿಂಡರ್ಗಳ ಮೇಲೆ ಈ ಬೆಲೆ ಏರಿಕೆ ಅನ್ವಯವಾಗಲಿದೆ.
ಹಬ್ಬದ ಸೀಸನ್ ಆರಂಭವಾಗುತ್ತಿರುವ ಈ ಸಮಯದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿರುವುದು ವ್ಯಾಪಾರಿ ವಲಯದಲ್ಲಿ ಆತಂಕ ಮೂಡಿಸಿದೆ.
ಈ ಏರಿಕೆಯಿಂದಾಗಿ ಹೊರಗಿನ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆ ಮತ್ತು ಇಂಧನ ದರಗಳಲ್ಲಿನ ಏರಿಳಿತದ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಆದರೆ, ಈ ಮಧ್ಯೆ ಸಾಮಾನ್ಯ ಜನರಿಗೆ ಸಮಾಧಾನಕರ ಸುದ್ದಿಯೊಂದಿದೆ. 14.2 ಕೆಜಿ ತೂಕದ ಮನೆ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಗೃಹ ಬಳಕೆಯ ಗ್ಯಾಸ್ ದರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದ್ದು ಇದರಿಂದ ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ ಮೇಲೆ ಯಾವುದೇ ಹೆಚ್ಚಿನ ಹೊರೆ ಬೀಳುವುದಿಲ್ಲ. ಕಳೆದ ಕೆಲವು ತಿಂಗಳಿಂದ ಗೃಹ ಬಳಕೆಯ ಗ್ಯಾಸ್ ದರದಲ್ಲಿ ಸ್ಥಿರತೆ ಕಂಡುಬಂದಿದ್ದು, ಸದ್ಯಕ್ಕೆ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.


