
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಏ.28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಆಂಜನೇಯ ನಗರದಲ್ಲಿ 40ಕ್ಕೂ ಹೆಚ್ಚು ಖಾಸಗಿ ಕಂಪನಿಗಳಿಂದ “ಬೃಹತ ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿದ ಪುರುಷ ಮತ್ತು ಮಹಿಳೆ ಅಭ್ಯರ್ಥಿಗಳು ಆನ್ ಲೈನ್ ವೆಬ್ ಸೈಟ್ https://tinyurl.com/f9pfbxsb ದಲ್ಲಿ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 9972218311, 9972029844, 9482635750, 9148183174, 7975856566 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.