Kannada NewsLatestNational

*ಭೀಕರ ಭೂಕುಸಿತ: ಮಕ್ಕಳು ಸೇರಿದಂತೆ ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೀಕರ ಭೂಕುಸಿತ ಸಂಭವಿಸಿ, ಮಕ್ಕಳು ಸೇರಿದಂತೆ 4 ಜನರು ಸಾವನ್ನಪ್ಪಿದ್ದಾರೆ. 

ಭಾರಿ ಮಳೆಯಿಂದಾಗಿ ಈ ಪ್ರದೇಶದಲ್ಲಿ ದಿಢೀರ್ ಪ್ರವಾಹವೂ ಉಂಟಾಗಿದೆ. ಭೂಕುಸಿತದ ಭೀಕರತೆಗೆ ಹಲವು ಮನೆಗಳು ಕೊಚ್ಚಿಹೋಗಿವೆ. ಮಣ್ಣಿನ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿರಬಹುದಾದ ಜನರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. 

ಭೂಕುಸಿತದ ಬೆನ್ನಲ್ಲೇ ಈ ಪ್ರದೇಶಕ್ಕೆ ಭಾರಿ ಪ್ರಮಾಣದ ನೀರು ನುಗ್ಗುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡ್ಡಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಣ್ಣಿನ ರಾಶಿಯಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಪತ್ತೆಹಚ್ಚಲು ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಡಳಿತ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಅಪಾಯದ ಪ್ರದೇಶಗಳಲ್ಲಿರುವ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವೂ ನಡೆಯುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button