ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಹಾಗೂ ಪೂರ್ವ ಯೋಜಿತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಬಿಜೆಪಿ ಕಾರ್ಯಕರ್ತರು ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಿದರು.
ಮುಡಾ ಹಗರಣದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ವ್ಯಕ್ತಿಗಳು ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಅನುಮತಿ ನೀಡಿದ ಕೂಡಲೇ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಬೆಂಬಲಿಗರು ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಅಂಥವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಗೆ ಕಾರಣರಾದ ಹಾಗೂ ಮುಡಾದ ನಿವೇಶನಗಳನ್ನು ತಮ್ಮ ಪತ್ನಿಗೆ ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಳ್ಳುವ ಮೂಲಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಈಗ ಶೋಷಿತ ವರ್ಗಗಕ್ಕೆ ಸೇರಿದ ರಾಜ್ಯಪಾಲರ ಮೇಲೆ ಮುಗಿ ಬಿದ್ದಿರುವುದು ಕಾಂಗ್ರೆಸ್ ಶೋಷಿತ ಸಮುದಾಯದ ವಿರೋಧಿ ಪ್ರವೃತ್ತಿಯಾಗಿದೆ ಎಂದು ದೂರಿದ್ದಾರೆ.
ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ್, ನಗತ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ ಪಾಟೀಲ್, ಡಾ.ವಿ.ಐ. ಪಾಟೀಲ್, ಬಿಜೆಪಿ ಮುಖಂಡರಾದ ಮುರುಘೇಂದ್ರಗೌಡ ಪಾಟೀಲ್, ಲೀನಾ ಟೋಪಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ