
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಮಹಾನಗರ ಪಾಲಿಕೆ ಹತ್ತು ಮಹಾನಗರ ಪಾಲಿಕೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆಯನ್ನು ನಡೆಸಲಾಗುತ್ತಿದ್ದು, ಅದಕ್ಕೆ ಬೆಂಬಲ ನೀಡಲು ಬೆಳಗಾವಿಯ ಮಹಾನಗರ ಪಾಲಿಕೆಯ ಮುಂದೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ನೌಕರರಿಗೆ 7ನೇ ವೇತನ ಆಯೋಗ ಸೌಲಭ್ಯವನ್ನು ಪಾಲಿಕೆ ನೌಕರಸ್ಥರಿಗೂ ಜಾರಿ ಮಾಡುವುದು ಹಾಗೂ ರಾಜ್ಯ ಆರ್ಥಿಕ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಬೇಕು. ಪಾಲಿಕೆ ನೇಮಕಾತಿ ನಿಯಮಾವಳಿ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಪ್ರಕಟಿಸಬೇಕು. ಕೆ.ಜಿ ಐಡಿ, ಜಿ ಪಿ ಎಫ್ ಸೌಲಭ್ಯಗಳನ್ನು ಪಾಲಿಕೆ ನೌಕರರಿಗೆ ವಿಸ್ತರಿಸಿ, ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ ಆರೋಗ್ಯ, ಆರೋಗ್ಯ ಸಂಜೀವಿನಿ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ವಿಸ್ತರಿಸಲು ಆಗ್ರಹಿಸಲಾಯಿತು.
ಮಹಾನಗರ ಪಾಲಿಕೆ ಅಧಿಕಾರಿ ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದಲ್ಲಿ ಹುದ್ದೆಯಲೆ ಮುಂಬಡ್ತಿ ವಂಚಿತರಾಗಿರುವುದರಿಂದ ಕೂಡಲೇ ವಿವಿಧ ಹುದ್ದೆಗಳಿಗೆ ಮುಂಬಡ್ತಿ ನೀಡಲು ಕ್ರಮ ಕೈಗೊಳ್ಳಬೇಕು. ಸರ್ಕಾರ ಪಾಲಿಕೆ ನೌಕರರ ಬೇಡಿಕೆಗಳನ್ನು ಪರಿಗಣಿಸಿದವರಿಗೆ ಮಹಾನಗರ ಪಾಲಿಕೆಯ ಯಾವುದೇ ರೀತಿಯ ಸಾರ್ವಜನಿಕ ಕಾರ್ಯ ಕಲಾಪಗಳು ನಡೆಸುವದಿಲ್ಲ ಎಂದು ಎಚ್ಚರಿಕೆ ನೀಡಿದರು.