Kannada NewsKarnataka News

ನೆರೆಹಾನಿ ಪರಿಶೀಲನೆಗೆ ಭಾನುವಾರ ಕೇಂದ್ರ ತಂಡ 

ನೆರೆಹಾನಿ ಪರಿಶೀಲನೆಗೆ ಭಾನುವಾರ ಕೇಂದ್ರ ತಂಡ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಅಂತೂ ಕೇಂದ್ರ ತಂಡ ಪ್ರವಾಹ ಪರಿಶಾಲನೆಗೆ ಭಾನುವಾರ ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದಾಗ ನಿಯೋಗ ಕಳಿಸುವುದಾಗಿ ಹೇಳಿದ್ದರು.
ಇದಕ್ಕೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹಲ್ಲಾದ ಜೋಶಿ ಹಾಗೂ ಗೃಹ ಸಚಿವ ಅಮಿತ್ ಶಾ ಪ್ರವಾಹ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದರು.
ಕೇಂದ್ರ ಈವರೆಗೆ ಕೇವಲ ಒಂದು ಸಾವಿರ ಕೋಟಿ ರೂ. ತಾತ್ಕಾಲಿಕ ಪರಿಹಾರ ಬಿಡುಗಡೆ ಮಾಡಿದೆ. ಕೇಂದ್ರ ತಂಡದ ಪರಿಶೀವನೆ ಬಳಿಕ ಹೆಚ್ಚಿನ ಪರಿಹಾರ ನಿರೀಕ್ಷಿಸಲಾಗಿದೆ.
ನೆರೆಹಾನಿ ಕುರಿತು ಪರಿಶೀಲಿಸಲು ಕೇಂದ್ರ ಅಧ್ಯಯನ ತಂಡ ಭಾನುವಾರ (ಆ.25) ಜಿಲ್ಲೆಯ ವಿವಿಧ ಕಡೆ ಭೇಟಿ ನೀಡಲಿದೆ.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತಂಡವು ಪ್ರವಾಹದಿಂದ ಬಾಧಿತಗೊಂಡಿರುವ ಚಿಕ್ಕೋಡಿ, ಕಾಗವಾಡ, ರಾಯಬಾಗ, ಗೋಕಾಕ ಮತ್ತು ರಾಮದುರ್ಗ ತಾಲ್ಲೂಕಿನಲ್ಲಿ ಉಂಟಾಗಿರುವ ಹಾನಿಯ ಕುರಿತು ಅಧ್ಯಯನ ನಡೆಸಲಿದೆ.

 

ಈ ಸಂದರ್ಭದಲ್ಲಿ ಮನೆಗಳ ಹಾನಿ, ಬೆಳೆಹಾನಿ, ರಸ್ತೆ-ಸೇತುವೆಗಳು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿಯನ್ನು ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

Related Articles

Back to top button