ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರದ ವಿಶಾಲಗಡ ಬಳಿಯ ಗಾಜಾಪೂರದಲ್ಲಿ ಅನ್ಯಕೊಮಿನವರು ಮಸಿದಿ ಮೇಲೆ ಮಾಡಿರುವ ಹಲ್ಲೆಯನ್ನು ಖಂಡಿಸಿ ಬೆಳಗಾವಿಯಲ್ಲಿ ಎಸ್ ಡಿಪಿಐ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಇಂದು ನಗರದ ಚನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನೆಯು ಕೋರ್ಟ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ನೂರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಡಿಸಿ ಕಚೇರಿ ಎದುರು ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಮನವಿ ಸಲ್ಲಿಸಿದರು.
ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ಅನ್ಯಾಯ ಹೆಚ್ಚುತ್ತಿವೆ. ದೇಶದಲ್ಲಿ ಶಾಂತಿ ಇಲ್ಲದಂತಾಗಿದೆ. ಈ ಅನ್ಯಾಯದ ವಿರುದ್ದು ಎಸ್ ಡಿ ಪಿ ಐ ದೇಶಾದ್ಯಂತ ಪ್ರತಿಭಟನೆ ಕೈಗೊಂಡಿದೆ. ಕೂಡಲೇ ಅಲ್ಪಸಂಖ್ಯಾತರು ಮತ್ತು ದಲಿತರ ಮೇಲಿನ ದೌರ್ಜನ್ಯವನ್ನು ನಿಲ್ಲಿಸದಿದ್ದರೇ ಉಗ್ರ ಪ್ರತಿಭಟನೆಯನ್ನು ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ