*ರಮೇಶ್ ಕತ್ತಿ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಮಾಜಿ ಸಂಸದ ರಮೇಶ್ ಕತ್ತಿ ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಒತ್ತಾಯಿಸಿ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ನೂರಾರು ಜನರು ಪ್ರತಿಭಟಿಸಿದರು.
ಸೋಮವಾರ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾಜಿ ಸಂಸದ ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಬೆಂಕಿ ಹಚ್ಚುವ ಮೂಲಕ ರಮೇಶ್ ಕತ್ತಿ ಭಾವಚಿತ್ರವನ್ನು ಸುಟ್ಟು ಆಕ್ರೋಶ ಹೊರ ಹಾಕಿದರು.
ರಮೇಶ್ ಕತ್ತಿ ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ. ಆದರೆ ತಮ್ಮ ಸ್ಥಾನದ ಬಗ್ಗೆ ಅರಿವಿಲ್ಲದೆ ಎಸ್ಟಿ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ರಮೇಶ ಕತ್ತಿ ಅವರ ಮಾತಿನಿಂದ ಸಮಾಜದ ಜನತೆಗೆ ನೋವುಂಟು ಮಾಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ರಮೇಶ ಕತ್ತಿ ಮಾತಿನಿಂದ ಬೇರೆ ಬೇರೆ ಸಮುದಾಯಗಳ ನಡುವೆ ಸಂಘರ್ಷ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ರಮೇಶ ಕತ್ತಿ ಅವರನ್ನು ಶೀಘ್ರವೇ ಬಂಧಿಸಬೇಕು. ಇಲ್ಲವಾದಲ್ಲಿ ಬರುವ 24 ರಂದು ವಾಲ್ಕೀಕಿ ಸಮಾಜ ಸೇರಿದಂತೆ ಹಿಂದುಳಿದ ಸಮುದಾಯಗಳಿಂದ ಬೆಳಗಾವಿಯನ್ನು ಬಂದ್ ಮಾಡಲಾಗುವುದು ಎಂದು ಇದೇ ವೇಳೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.