Belagavi NewsBelgaum NewsElection NewsKannada NewsKarnataka NewsPolitics

ನೇಹಾ ಕೊಲೆ ಖಂಡಿಸಿ ಬೆಳಗಾವಿಯಲ್ಲಿ ಸೋಮವಾರ ಪ್ರತಿಭಟನೆ: ಸಂಸದೆ ಮಂಗಳ ಅಂಗಡಿ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆಯನ್ನು ಖಂಡಿಸಿ ಮಹಿಳಾ ಹಿತರಕ್ಷಣಾ ವೇದಿಕೆ ವತಿಯಿಂದ ಸೋಮವಾರ ಬೆಳಗಾವಿ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದೆ ಮಂಗಳ ಅಂಗಡಿ ಅವರು ತಿಳಿಸಿದರು. 

ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಆಯೋಜನೆ ಮಾಡಲಾಗಿದ್ದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆಯನ್ನು ನಾವು ಖಂಡಿಸುತ್ತೇವೆ.‌ ನೇಹಾ ಕೊಲೆಗೆ ನ್ಯಾಯ ಒದಗಿಸಲು ನಾಳೆ ಪ್ರತಿಭಟನೆಗೆ ಕರೆ ನೀಡಿಲಾಗಿದೆ‌.‌ ನಾಳಿನ ಪ್ರತಿಭಟನೆಯಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಲಿದ್ದಾರೆ. ಈ ರೀತಿ ಘಟನೆಗಳು ಮುಂದೆ ನಡೆಯಬಾರದು.‌ ಆದರೆ ಪದೆ ಪದೆ ಈ ರೀತಿ ಘಟನೆಗಳು ನಡೆಯುತ್ತಿವೆ.‌ ಬೆಳಗಾವಿಯ ವಂಟಮೂರಿಯಲ್ಲಿ ಘಟನೆ ಆಗಿ ಕೆವಲ ನಾಲ್ಕು ತಿಂಗಳು ಅಷ್ಟೆ ಆಗಿದೆ. ಅಷ್ಟರಲ್ಲಿ ಹುಬ್ಬಳ್ಳಿಯಲ್ಲಿ ಘಟನೆ ನಡೆದಿದೆ.‌ ಹಾಗಾಗಿ ನಾಳೆ ಪ್ರತಿಭಟನೆ ಮಾಡುತ್ತಿದೇವೆ ಎಂದರು. 

ಶಾಸಕ ಅಭಯ ಪಾಟೀಲ್ ಮಾತನಾಡಿ, ಕಾಂಗ್ರೆಸ್ ಆಡಳಿತದಲ್ಲಿ ಹಿಂದು ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಮೊನ್ನೆ ಹುಬ್ಬಳ್ಳಿಯಲ್ಲಿ ಆದ ಘಟನೆ ಬೆಳಗಾವಿಯಲ್ಲಿ ಕೂಡ ಮುಂದೆ ಆಗಬಹುದು. ಹಾಗಾಗಿ ಜಾಗೃತರಾಗಬೇಕು. ಹಾಗಾಗಿ ಮಹಿಳಾ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಲಿದೆ.‌ ನಾಳೆ ಎಷ್ಟು ಗಂಟೆಗೆ ಪ್ರತಿಭಟನೆ ಆಗಲಿದೆ ಎಂದು ತಿಳಿಸುತ್ತೇವೆ ಎಂದರು.

ರಾಜ್ಯ ಬಿಜೆಪಿ ವಕ್ತಾರ ಎಂ.ಬಿ ಜೀರಳಿ ಮಾತನಾಡಿ, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆಯನ್ನು ನಾವು ಅತ್ಯಂತ ಕಟುವಾಗಿ ಖಂಡಿಸುತ್ತೇವೆ. ನೇಹಾ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ಮಾಡಿದರೆ ಅವರ ಮೇಲೇ ಕೇಸ್ ಹಾಕಲಾಗಿದೆ. ನೇಹಾ ಕುರಿತು ಸೊಶಿಯಲ್ ಮೀಡಿಯಾದಲ್ಲಿ ಸುಳ್ಳು ಪೋಸ್ಟ್ ಹಾಕಲಾಗುತ್ತಿದೆ. ಇದರ ಹಿಂದೆ ಜೀಹಾದಿ ಮಾನಸಿಕತೆ ಇದೆ. ಈ ಪ್ರಕರಣ ಕೂಲಂಕಷವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.‌

Home add -Advt

ಎಲ್ಲಿಯವರೆಗೆ ನೇಹಾ ಆತ್ಮಕ್ಕೆ ಶಾಂತಿ ಸಿಗುವದಿಲ್ಲವೋ ಅಲ್ಲಿಯವರೆಗೆ ಬಿಜೆಪಿ ಪ್ರತಿಭಟಿಸುತ್ತೆ. ಈ ಕೊಲೆ ಕಾಲೇಜಿನ‌ ಆವರಣದಲ್ಲೇ ಹಾಡಹಗಲೆ ಆಗಿದೆ.‌ ಎಲ್ಲಾ ಪಾಲಕರು ನಮ್ಮ ಮಕ್ಕಳ ಭವಿಷ್ಯ ಏನು ಎಂಬ ಭಯದ ವಾತಾವರಣದಲ್ಲಿ ಇದ್ದಾರೆ ಎಂದರು.‌

ಈ ವೇಳೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ, ಪಾಲಿಕೆ ಮೇಯರ್ ಸವಿತಾ ಕಾಂಬಳೆ, ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಶುಭಾಶ ಪಾಟೀಲ್, ಮಾಜಿ ಶಾಸಕ ಸಂಜಯ ಪಾಟೀಲ್, ಸಿದ್ದನಗೌಡಾ ಪಾಟೀಲ್, ಹನಮಂತ ಕೊಂಗಾಲಿ ಮತ್ತಿತರರು ಉಪಸ್ಥಿತರಿದ್ದರು.‌

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button