Belagavi NewsBelgaum NewsKannada NewsKarnataka News

*ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ‌ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಕೋಳಿ ಬೆಸ್ತ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.‌

ಶುಕ್ರವಾರ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಅಂಜಲಿ ಕೊಲೆ ಆರೋಪಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ನೇಹಾ ಹಿರೇಮಠ ಹತ್ಯೆ ಸಂದರ್ಭದಲ್ಲೇ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ ಅಂಜಲಿ ಹಂತಕ ಕೊಲೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ಮೌಖಿಕ ದೂರು ನೀಡಿದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದರಿಂದ ಅಂಜಲಿ ಹತ್ಯೆ ನಡೆದಿದೆ ಎಂದು ಆರೋಪಿಸಿದರು.

ನೇಹಾ ಹಾಗೂ ಅಂಜಲಿ ಹಂತಕರನ್ನು ಗಲ್ಲಿಗೇರಿಸಿ, ಎನ್‌ಕೌಂಟರ್‌ ಮಾಡಿ. ಸಾಧ್ಯವಾಗದಿದ್ದರೆ ನಮ್ಮ ಕೈಗೆ ಅವರನ್ನು ಕೊಟ್ಟುಬಿಡಿ ನಾವು ನೋಡಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Home add -Advt

ಇದೇ ವೇಳೆ ಎಂಎಲ್ಸಿ ಸಾಬಣ್ಣ ತಳವಾರ ಮಾತನಾಡಿ. ಹುಬ್ಬಳ್ಳಿಯಲ್ಲಿ ಇದು ಎರಡನೇ ಘಟನೆ ಆಗಿದೆ.ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಅಂಜಲಿ ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಮೃತ ಅಂಜಲಿ ಕುಟುಂಬದ ಸದಸ್ಯರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.‌

ಈ ವೇಳೆ ಮಾಜಿ ಉಪ ಮಹಾಪೌರ ಮಧುಶ್ರೀ ಪೂಜಾರಿ, ಕೋಳಿ ಬೆಸ್ತ ಸಮಾಜದ ಜಿಲ್ಲಾಧ್ಯಕ್ಷ ದಿಲೀಪ ಕುರದಂವಾಡೆ, ಧರೆಪ್ಪ ಪೂಜಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

Back to top button