ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟಿಸಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ 48 ಸಾವಿರ ಶಾಲೆಗಳು ಇಂದು ಬಂದ್ ಆಗಲಿವೆ.
ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, 1.30 ಲಕ್ಷ ಶಿಕ್ಷಕರು ಭಾಗವಹಿಸುತ್ತಿದ್ದಾರೆ. ಶಿಕ್ಷಕರು ಅನೇಕ ಬಾರಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲಾಖೆಯ ಮೊರೆ ಹೋಗಿದ್ದರು. ಪ್ರಯೋಜನವಾಗದೆ ಬೀದಿಗಿಳಿಯಲು ನಿರ್ಧರಿಸಿದ್ದಾರೆ.
ಶಾಲೆ ಬಂದ್ ಮಾಡದಂತೆ ಇಲಾಖೆಯಿಂದ ಆದೇಶ ಹೊರಡಿಸಿದೆ. ಆದರೆ ಇಲಾಖೆಯ ಆದೇಶಕ್ಕೆ ಕಿವಿಗೊಡದೆ 1.30 ಲಕ್ಷ ಶಿಕ್ಷಕರು ಪ್ರತಿಭಟನ ನಡೆಸಲು ಮುಂದಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ನಾಗೇಶ್ ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ