Politics

*ರಾಜೀನಾಮೆಗೂ ಸಿದ್ಧ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇಂದು ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಬಾಣಂತಿಯರ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಬಾಣಂತಿಯರ ಸಾವು ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

ಆಸ್ಪತ್ರೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಇಂದು ಮತ್ತೊಂದು ಸಾವಾಗಿದೆ. ಘಟನೆ ನಡೆಯುತ್ತಿದ್ದಂತೆ ತನಿಖೆ ನಡೆಸಲಾಗಿತ್ತು. ಎಲ್ಲರಿಗೂ ಒಂದೇ ಬ್ಯಾಚ್ ನ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕೊಡಲಾಗಿತ್ತು ಎಂದು ತಿಳಿದುಬಂದಿದೆ. ಆಸ್ಪತ್ರೆ ಎಂಡಿಗೂ ನೋಟಿಸ್ ನೀಡಲಾಗಿದೆ. ಔಷಧಿ ಕಂಪನಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಎಲ್ಲಾ ಆಸ್ಪತ್ರೆಗಳಲ್ಲಿಯು ಐವಿ ಫ್ಲೂಯಿಡ್ ದ್ರಾವ, ರಿಂಗರ್ ಲ್ಯಾಕ್ಟೇಟ್ ಸ್ಥಗಿತಗೊಳಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ ಎಂದರು.

ನನ್ನ ತಪ್ಪಿದ್ದರೆ ರಾಜೀನಾಮೆಗೂ ಸಿದ್ಧ. ನನ್ನ ರಾಜೀನಾಮೆಯಿಂದ ಸರಿಯಾಗುವುದಾದರೆ ಅದಕ್ಕೂ ನಾನು ಸಿದ್ಧನಿದ್ದೇನೆ. ಬಿಜೆಪಿಯವರು ಲೋಕಾಯುಕ್ತಕ್ಕೆದೂರು ಕೊಡುವುದಾದರೆ ಕೊಡಲಿ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button