
ಪ್ರಗತಿವಾಹಿನಿ ಸುದ್ದಿ: ಕಲಬುರಗಿಯಲ್ಲಿ ಬಾಣಂತಿ ಸಾವಿನ ಸರಣಿ ಮುಂದುವರೆದಿದೆ. ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಬಾನಂತಿ ಹಾಗೂ ನವಜಾತ ಶಿಶು ಇಬ್ಬರೂ ಸಾವನ್ನಪ್ಪಿದ್ದಾರೆ. ನೊಂದ ಕುಟುಂಬದವರು ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ.
ಸಭಾ ಪರ್ವಿನ್ ಮೃತ ಬಾಣಂತಿ. ಆಕೆಯ ನವಜಾಅ ಶಿಶು ಕೂಡ ಸಾವನ್ನಪ್ಪಿದೆ. ಭಾನುವಾರ ಸಂಜೆ ಸಭಾ ಪರ್ವೀನ್ ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿದ್ದರು.
ಹೆರಿಗೆಗೂ ಮುನ ಗರ್ಭಡಲ್ಲೇ ಮಗು ಸಾವನ್ನಪ್ಪಿರುವ ಶಂಕೆ ಇದೆ ಎಂದು ವೈದ್ಯರು ಹೇಳಿದ್ದರು. ಬಳಿಕ ಲೋ ಬಿಪಿಯಿಂದ ತಾಯಿ ಕೂಡ ಸಾವನ್ನಪ್ಪಿದ್ದಾಳೆ. ವೈದ್ಯರ ನಿರ್ಲಕ್ಷವೇ ತಾಯಿ ಮಗುವಿನ ಸಾವಿಗೆ ಕಾರಣ ಎಂದು ಆರೋಪಿಸಿ ಕುಟುಂಬದವರು ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿ, ಕಿಡಕಿ ಗಜುಗಳನ್ನು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.