Belagavi NewsBelgaum NewsKannada NewsKarnataka NewsPolitics

*ನಿಪ್ಪಾಣಿ ತಾಲೂಕಿಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು: ಶಾಸಕಿ ಶಶಿಕಲಾ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ: ನಿಪ್ಪಾಣಿ ತಾಲೂಕಿಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರಾಗಿದ್ದು, ಈ ವಿಶೇಷ ತಿಳಿಸುವುದಕ್ಕೆ ಅತೀವ ಸಂತಸವಾಗುತ್ತಿದೆ‌ ಎಂದು ಮಾಜಿ ಸಚಿವರು ಹಾಗೂ ನಿಪ್ಪಾಣಿ  ಶಾಸಕರರಾದ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದಾರೆ.

ನಿಪ್ಪಾಣಿ ತಾಲೂಕಿನಲ್ಲಿ ಈ ಮಾದರಿ ಶಾಲೆಯು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ತನ್ನ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಇದರಿಂದಾಗಿ ತಾಲೂಕಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಮೂಲಭೂತ ಸೌಲಭ್ಯಗಳು ಲಭ್ಯವಾಗಲಿದೆ. ನನ್ನ ಕ್ಷೇತ್ರದಲ್ಲಿ ಯಾವ ವಿಧ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಶಾಲೆ ಪ್ರಾರಂಭಿಸಲಾಗುವುಡು ಎಂದು ಪತ್ರಿಕಾ ಪ್ರಕಟಣೆಯಲ್ಲಿ ನಿಪ್ಪಾಣಿ ಶಾಸಕಾರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಶಾಲೆಯನ್ನು ಪ್ರಾರಂಭಿಸಲು ಸಹಕರಿಸಿದ ಸರ್ಕಾರಕ್ಕೆ ಹಾಗೂ ನಮ್ಮ ಪಕ್ಕದ ಹಿರಿಯ ನಾಯಕರಿಗೆ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button