Karnataka News

*ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿಯ ಜಾಹೀರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಕಾನೇಹಳ್ಳ ಕ್ರಾಸ್ ನಲ್ಲಿ ನಡೆದಿದೆ.

ಯಶವಂತ್ ಹಾಗೂ ನಿಸಾರ್ ಮೃತರು. ಇಬ್ಬರೂ ಗಾಜನೂರು ಐಟಿಐ ಕಾಲೇಜು ವಿದ್ಯಾರ್ಥಿಗಳು. ಯಶವಂತ್ ದ್ವಿತೀಯ ವರ್ಷದ ಐಟಿಐ ವಿದ್ಯಾರ್ಥಿಯಾಗಿದ್ದರೆ, ನಿಸಾರ್ ಮೊದಲ ವರ್ಷದ ಐಟಿಐ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.

ಕಾಲೇಜಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಜಾಹೀರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಇಬ್ಬರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button