ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಲು ಖಾಸಗಿ ಆಸ್ಪತ್ರೆಗೆ ಗುರುವಾರ ರಾತ್ರಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಗಮಿಸಿದರು.
ಬೆಂಗಳೂರಿನಿಂದ ಸಾಂಬ್ರಾ ವಿಮಾನ ನಿಲ್ದಾಣದ ಮೂಲಕ ನೇರವಾಗಿ ಖಾಸಗಿ ಆಸ್ಪತ್ರೆಗೆ ಬಂದ ಸಚಿವ ಸತೀಶ್ ಜಾರಕಿಹೊಳಿ ಅವರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರೊಂದಿಗೆ ಮೊದಲು ಆರೋಗ್ಯ ವಿಚಾರಿಸಿದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆ ಪಡೆಯುತ್ತಿರುವ ವಾಡ್೯ಗೆ ತೆರಳಿ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ಸುಧಾರಿಸುತ್ತಿದೆ. ಆದಷ್ಟು ಬೇಗ ಹುಷಾರಾಗಲಿ. ಚೇತರಿಸಿಕೊಳ್ಳಲು ಸಮಯಾವಕಾಶಬೇಕು. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಕಳೆದ ಮಂಗಳವಾರ ಅವರ ಕಾರು ಅಪಘಾತವಾಗಿತ್ತು. ವೈದ್ಯರ ಸೂಚನೆ ಮೇರೆಗೆ ಇನ್ನೊಂದು ಮೂರನ್ನಾಲ್ಕು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯಬೇಕು. ಆದಷ್ಟು ಬೇಗ ಗುಣಮುಖರಾಗಲಿ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ