Belagavi NewsBelgaum NewsKannada NewsKarnataka News

*ಪಾಲಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರುಗಳ ಕಚೇರಿ ಉದ್ಘಾಟಿಸಿದ  ಮೇಯರ್ ಪ್ರೀತಿ ಕಾಮಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರದ ಸರ್ವತೋಮುಖ ಅಭಿವೃದ್ಧಿಗೆ ನಾವೆಲ್ಲರೂ ಬದ್ಧವಾಗಿದ್ದೇವೆಂದು ಮೇಯರ್ ಪ್ರೀತಿ ಕಾಮಕರ್ ಹೇಳಿದರು.

ಗುರುವಾರ ಪಾಲಿಕೆಯಲ್ಲಿ ತೆರಿಗೆ ನಿರ್ಧರಣೆ, ಹಣಕಾಸು ಹಾಗೂ ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಮೈಲುಗೋಳ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಭಾತಕಾಂಡೆ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೇಯಸ್ ನಾಕಾಡಿ, ಲೆಕ್ಕಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾರಿಕಾ ಪಾಟೀಲ

ಅವರುಗಳ ಕಚೇರಿಗಳನ್ನು

ಹಾಗೂ ಪಾಲಿಕೆ ಅಭಿವೃದ್ಧಿ ವಿಭಾಗದ ಉಪ ಆಯುಕ್ತರಾದ  ಲಕ್ಷ್ಮಿ ನಿಪ್ಪಾಣಿಕರ್ ಅವರ ನೂತನ ಕಚೇರಿಯನ್ನೂ ಉದ್ಘಾಟಿಸಿ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲ ಸ್ಥಾಯಿ ಸಮಿತಿಗಳಿಗೆ ಸಮರ್ಥ ವ್ಯಕ್ತಿಗಳು ಅಧ್ಯಕ್ಷರಾಗಿದ್ದು ನಾವೆಲ್ಲರೂ ಸೇರಿ ಒಗ್ಗಟ್ಟಿನಿಂದ ಜನೋಪಯೋಗಿ ಕಾರ್ಯಗಳನ್ನು ಮಾಡುತ್ತೇವೆ ಎಂದು ಹೇಳಿದರು. 

ಉಪಮೇಯರ ಹಣಮಂತ ಕೊಂಗಾಲಿ ಮಾತನಾಡಿ, ವರಿಷ್ಠರ ಹಾಗೂ ಪ್ರಮುಖರ ಸಲಹೆ ಪಡೆದು ಅಧ್ಯಕ್ಷರುಗಳನ್ನು ಆಯ್ಕೆ ಮಾಡಲಾಗಿದ್ದು, ಜವಾಬ್ದಾರಿಗಳನ್ನು ಅವರೆಲ್ಲರೂ ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ಭರವಸೆ ಇದೆ. ಗಣೇಶ ಚತುರ್ಥಿಗೆ ನಗರವನ್ನು ಅತಿ ಶೀಘ್ರವಾಗಿ ಸಜ್ಜುಗೊಳಿಸುತ್ತೇವೆ ಎಂದು ಹೇಳಿದರು.

ಪಾಲಿಕೆ ಆಯುಕ್ತ ಕಾರ್ತಿಕ್ ಎಂ, ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ್, ಸಮಿತಿ ಸದಸ್ಯರು, ನಗರಸೇವಕರು 

ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಎಲ್ಲಾ ಅಧ್ಯಕ್ಷರು ತಮ್ಮ ತಮ್ಮ ಕಚೇರಿಗಳನ್ನು ಪ್ರವೇಶ ಮಾಡಿ ಅಧಿಕಾರ ಸ್ವೀಕರಿಸಿದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button