ಪ್ರಗತಿವಾಹಿನಿ ಸುದ್ದಿ, ಮೈಸೂರು: ಇಲ್ಲಿನ ವಲಯ ಕಚೇರಿ-1ರಲ್ಲಿ ಖಾತೆ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ಸಿಬ್ಬಂದಿಯನ್ನು ಮೇಯರ್ ಶಿವಕುಮಾರ್ ತರಾಟೆಗೆ ತೆಗೆದುಕೊಂಡರು.
ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅರ್ಜಿದಾರರು ತಮಗೆ ಸಲ್ಲಿಸಿದ್ದ ದೂರು ಆಧರಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಬಿಸಿ ಮುಟ್ಟಿಸಿದರು.
ಖಾತೆ ಬದಲಾವಣೆ, ಖಾತೆ ಮಾಡಿಕೊಡುವುದಕ್ಕೆ ಸಂಬಂಧಿಸಿದಂತೆ ಹಲವು ಅರ್ಜಿಗಳು ಬಾಕಿ ಇರುವುದನ್ನು ಗಮನಿಸಿದರು. ‘ಸಾರ್ವಜನಿಕರು ಅರ್ಜಿ ಸಲ್ಲಿಸಿದ ವಾರದೊಳಗೆ ಪರಿಶೀಲಿಸಿ ಖಾತೆ ಮಾಡಿಕೊಡಬೇಕು. ದಾಖಲೆಗಳು ಸರಿಯಾಗಿಲ್ಲದಿದ್ದರೆ ಹಿಂಬರಹ ನೀಡಿ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹಾಗೂ ಅನಗತ್ಯ ವಿಳಂಬ ಮಾಡಿದರೆ ಸಹಿಸಲಾಗದು’ ಎಂದು ಎಚ್ಚರಿಕೆ ನೀಡಿದರು.
‘ಕಂದಾಯ ಇನ್‌ಸ್ಪೆಕ್ಟರ್‌ಗಳು ನಿತ್ಯ 25 ಮನೆಗಳಿಗೆ ತೆರಳಿ ಖಾತೆ ಬದಲಾವಣೆ ಸೇರಿದಂತೆ ಇನ್ನಿತರ ಸಮಸ್ಯೆಗಳಿದ್ದಲ್ಲಿ ವಿಚಾರಿಸಬೇಕು. ಭೇಟಿ ನೀಡಿದ್ದನ್ನು ಸೆಲ್ಫಿ ಕ್ಲಿಕ್ಕಿಸಿ ವಲಯ ಆಯುಕ್ತರಿಗೆ ಕಳುಹಿಸಬೇಕು. ವಲಯ ಆಯುಕ್ತರು ಮೇಲ್ವಿಚಾರಣೆ ಮಾಡಬೇಕು’ ಎಂದು ಸೂಚಿಸಿದರು.
ಹಬ್ಬಗಳ ಹೆಸರುಗಳನ್ನು ಅಪಭ್ರಂಶಗೊಳಿಸದಿರಿ; ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಾಗೃತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ