Latest

ತಾಲೂಕು ಕಚೇರಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ನೌಕರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಾಲೂಕು ಕಚೇರಿ ನೌಕರನೊಬ್ಬ ಕಚೇರಿಯ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ನಡೆದಿದೆ.

ವೆಂಕಟೇಶ್ ಮೃತ ನೌಕರ. ತಾಲೂಕು ಕಚೇರಿಯಲ್ಲಿಯೇ ಕೆಲಸ ಮಾಡುತ್ತಿದ್ದ ವೆಂಕಟೇಶ್ ಇದ್ದಕ್ಕಿಂದ್ದತೆ ತಾಲೂಕು ಕಚೇರಿ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿಯಲ್ಲಿ ಮೂವರು ಮಕ್ಕಳು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

Related Articles

Back to top button