
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಹಾಸ್ಟೇಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಎ.ಜೆ.ಮೆಡಿಕಲ್ ಕಾಲೇಜು ಹಾಸ್ಟೇಲ್ ನಲ್ಲಿ ಈ ಘಟನೆ ನಡೆದಿದೆ. 20 ವರ್ಷದ ಪ್ರಕೃತಿ ಶೆಟ್ಟಿ ಮೃತ ವಿದ್ಯಾರ್ಥಿನಿ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಎಂಬಿಬಿಎಸ್ ಮುಗಿಸಬೇಕು ಎಂದು ಬಹಳ ಆಸೆ ಇತ್ತು. ಆದರೆ ನಾನು ದಪ್ಪ ಇದ್ದೇನೆ. ನನ್ನ ಸೌಂದರ್ಯಕ್ಕೆ ದಪ್ಪ ಇರುವುದೇ ಅಡ್ಡಿಯಾಗಿದೆ. ಸಣ್ಣ ಆಗಲು ಸಾಕಷ್ಟು ಪ್ರಯತ್ನ ಪಟ್ಟೆ ಆದರೂ ಸಾಧ್ಯವಾಗಿಲ್ಲ. ಹಾಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿದ್ಯಾರ್ಥಿನಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾಳೆ.
ಹಾಸ್ಟೇಲ್ ನ 6ನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ