
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಮೂರು ಜನ ಆರೋಪಿಗಳು ನಿಷೇದಿತ ಎಂಡಿಎಂಎ ಎಂಬ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವೇಳೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ದಾಳ ಮಾಡಿ ಬಂಧಿಸಿದ್ದಾರೆ.
ಆರೋಪಿಗಳಾದ ವಿನೋದ ತಾನಾಜಿ ಹರಾಜಿ (35), ಓಂ ಪುರುಷೋತ್ತಮ (22) ಹಾಗೂ ಕೌಶಿಕ ಕಿರಣ ಮುತಗೇಕರ (22) ಬಂದಿತರು.
ಈ ಮೂರು ಜನ ಆರೋಪಿಗಳು ಬೆಳಗಾವಿ ನಗರದ ಹಳೇ ಬಾಜಿ ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುವಾಗ ಮಾರ್ಕೇಟ್ ಪೊಲೀಸ್ ಠಾಣೆಯ ಪಿಎಸ್ಐ ವಿಠಲ ಹಾವನ್ನವರ ಹಾಗೂ ಸಿಬ್ಬಂದಿ ದಾಳಿ ಮಾಡಿ ಆರೋಪಿಗಳಿಂದ 20,000 ರೂ. ಮೌಲ್ಯದ 3.45 ಗ್ರಾಂ ಎಂಡಿಎಂಎ ಮಾದಕ ವಸ್ತು. 1,00,000 ರೂ. ಮೌಲ್ಯದ ಬೈಕ್, ಹೀಗೆ ಒಟ್ಟು 1,20,000 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ ರುತಿಕ ಪಾಟೀಲ ಎಂಬಾತನಿಂದ ತಂದಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ 4 ಜನ ಆರೋಪಿತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆ ಪ್ರ ಸಂಖ್ಯೆ. 71/2026 ಕಲಂ.8(c),22(b) ಎನ್ಡಿಪಿಎಸ್ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಿದ್ದು, ಪ್ರಕರಣದ ತನಿಖೆ ಮುಂದುವರೆಸಲಾಗಿದೆ.



