Film & Entertainment

*ನಟ ಕಮಲ್ ಹಾಸನಗೆ ಕನ್ನಡದ ಇತಿಹಾಸದ ಪಾಠದ ಮೂಲಕ ತಿರುಗೇಟು ನೀಡಿದ ನಟ ಜಗ್ಗೇಶ್*

ಪ್ರಗತಿವಾಹಿನಿ ಸುದ್ದಿ: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿರುವ ಬಹುಭಾಷ ನಟ ಕಮಲ್ ಹಾಸನ್ ವಿರುದ್ಧ ರಾಜ್ಯಾದ್ಯಂತ ಕನ್ನಡಿಗರು ಸಿಡಿದೆದ್ದಿದ್ದಾರೆ. ಕನ್ನಡಪರ ಸಂಘಟನೆಗಳು ಕಮಲ್ ಹಾಸನ್ ತಮ್ಮ ಹೇಳಿಕೆ ಹಿಂಪಡೆಯಬೇಕು. ಕನ್ನಡಿಗರ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ಮುಂದಿನವಾರ ಬಿಡುಗಡೆಗೆ ಸಿದ್ಧವಾಗಿರುವ ಕಮಲ್ ಹಾಸನ್ ಅವರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಈ ನಡುವೆ ಕೆಲ ಕನ್ನಡ ಸಿನಿ ಕಲಾವಿದರು ಕಮಲ್ ಹಾಸನ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಈ ನಡುವೆ ನಟ ಜಗ್ಗೇಶ್ ತಮ್ಮದೇ ಶೈಲಿನಲ್ಲಿ ಕಮಲ್ ಹಾಸನ್ ಅವರಿಗೆ ತಿರುಗೇತು ನೀಡಿದ್ದಾರೆ.

Home add -Advt

ಕಲೆಗೆ ಜಾತಿ ಇಲ್ಲಾ. ಎಲ್ಲಾಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ, ಆ ನಿಟ್ಟಿನಲ್ಲಿ ಕಮಲ್ ಹಾಸನ್ ರವರ ಮೆಚ್ಚಿದ್ದೇವೆ. ಅಂದ ಮಾತ್ರಕ್ಕೆ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪೋಲ್ಲಾ!

ಕನ್ನಡಕ್ಕೆ 2.5ಸಾವಿರ ವರ್ಷಗಳ ಇತಿಹಾಸವಿದೆ. ಅಷ್ಟೇಕೆ ಹನುಮದೇವರು ಕನ್ನಡ ಕಲಿಪುಂಗವ ಅವರ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್..! ಎಂದು ಪಾಠ ಮಾಡಿದ್ದಾರೆ.


Related Articles

Back to top button