*ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ಮಾರುಕಟ್ಟೆಯಲ್ಲಿ ಏರಿಳಿತ ಕಾಣುತ್ತಿರುವ ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ ಕೈಗೊಳ್ಳಲಾಗಿದ್ದು, ಕೆಜಿಗೆ 60 ರೂ. ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ದೆಹಲಿಯ ಕೃಷಿ ಭವನದಲ್ಲಿ ಇಂದು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳಿಗೆ ಚಾಲನೆ ನೀಡಿ ಬೆಲೆ ಸ್ಥಿರತೆ ಬಗ್ಗೆ ತಿಳಿಸಿದರು.
ದೆಹಲಿ, ಎನ್‌ಸಿಆರ್‌ನ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಏರಿಳಿತ ಕಾಣುತ್ತಿದ್ದು, ಸ್ಥಿರತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಟೊಮೆಟೋಗೆ ಚಿಲ್ಲರೆ ಬೆಲೆ ಪ್ರತಿ ಕಿಜಿಗೆ ₹ 60 ನಿಗದಿಪಡಿಸಲಾಗಿದೆ. ಅಲ್ಲದೇ, ಪ್ರಮುಖ 18 ಸ್ಥಳಗಳಲ್ಲಿ ಮಾರಾಟ ಮಾಡಲಾಗುವುದು. ಗ್ರಾಹಕರ ಅನುಕೂಲ ಮತ್ತು ಬೇಡಿಕೆಗೆ ಅನುಗುಣವಾಗಿ ಮಾರಾಟ ಸ್ಥಳಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ ಎಂದು ಸಚಿವ ಜೋಶಿ ತಿಳಿಸಿದರು.
ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳು ದೆಹಲಿ- ಎನ್‌ಸಿಆರ್ ಪ್ರದೇಶಗಳಲ್ಲಿ ಲಭ್ಯವಿರುತ್ತವೆ ಎಂದರು.
ದೆಹಲಿ, ಕೋಲಾರ ಮತ್ತು ರಾಜಸ್ಥಾನದ ಮಾರುಕಟ್ಟೆಗಳಿಂದ ಟೊಮೆಟೊ ಖರೀದಿಸಿ, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿ ಕೆಜಿಗೆ 60 ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸಚಿವರಾದ ಬಿ.ಎಲ್.ವರ್ಮಾ ಅವರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ