Belagavi NewsBelgaum NewsKannada NewsKarnataka NewsLatest
*ಫೆ.15 ರಂದು ಬೆಳಗಾವಿಯಲ್ಲಿ ಮಾಂಸ ಮಾರಾಟ ನಿಷೇಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಫೆಬ್ರವರಿ 15 ರಂದು ಮಹಾಶಿವರಾತ್ರಿ ನಿಮಿತ್ಯ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳನ್ನು ಬಂದು ಮಾಡುವುದು ಕಡ್ಡಾಯವಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳ ಮಾಲೀಕರುಗಳು ದಿ.15-02-2026 ರಂದು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸಬೇಕು. ಉಲ್ಲಂಘನೆ ಮಾಡಿರುವುದು ಕಂಡು ಬಂದರೆ ಅಂತಹ ಮಾಲೀಕರುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



