ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಶ್ವ ವೈದ್ಯರ ದಿನಾಚರಣೆ ನಿಮಿತ್ತ ಕೆಎಲ್‌ಇ ಡಾ. ಪ್ರಭಾಕರ ಕೋರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ಅನಿಲ ಬೆನಕೆ ಫೌಂಡೇಶನ್ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ನಗರದ ಚವ್ವಾಟಗಲ್ಲಿಯ ಜಾಲಗಾರ ಮಾರುತಿ ಮಂಗಲ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
ಶಾಸಕ ಅನಿಲ ಬೆನಕೆ ಅವರು ಎಲ್ಲ ವೈದ್ಯರಿಗೆ ಗುಲಾಬಿ ಹೂ ನೀಡಿ ವೈದ್ಯರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಉಚಿತ ಆರೋಗ್ಯ ಸೇವೆ ಎಲ್ಲ ವರ್ಗದ ಜನರಿಗೂ ಸಿಗಬೇಕು ಎಂಬ ದೃಷ್ಟಿಯಿಂದ ಬೆನಕೆ ಫೌಂಡೇಶನ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿ ವಾರ ಒಂದು ದಿನ ಉಚಿತ ಶಿಬಿರ ನಡೆಯಲಿದೆ. ಈಗಾಗಲೇ ಇದು ಎರಡನೆಯ ಶಿಬಿರವಾಗಿದೆ ಎಂದು ತಿಳಿಸಿದರು. ಎಲ್ಲರೂ ಸದುಪಯೋಗ ಪಡೆದು ಮಳೆಗಾಲದ ಈ ಸಂದರ್ಭದಲ್ಲಿ ಎಲ್ಲರೂ ಆರೋಗ್ಯದ ಕಡೆ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಶಿಬಿರದಲ್ಲಿ 30 ರಿಂದ 60 ಮೇಲ್ಪಟ್ಟ ವಯಸ್ಕರು ಶಿಬಿರದಲ್ಲಿ ಉಚಿತ ತಪಾಸಣೆ ಮಾಡಿಕೊಂಡರು. ಕೆಎಲ್‌ಇ ಸಂಸ್ಥೆಯ ಹೃದಯ ತಜ್ಞರು, ದಂತ ಚಿಕಿತ್ಸಕರು ಮತ್ತು ಆಯುರ್ವೇದ ವೈದ್ಯರ ತಂಡದವರು ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸರ್ಕಾರಿ ಶಾಲಾ ಮಕ್ಕಳಿಗೆ ವಾಹನ ಭಾಗ್ಯ; ರಾಜ್ಯ ಸರ್ಕಾರದಿಂದ ಆದೇಶ ಪ್ರಕಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ