EducationKannada NewsLatest

*5, 8, 9 ಹಾಗೂ 11ನೇ ತರಗತಿಗಳ ಬೋರ್ಡ್ ಎಕ್ಸಾಂ ವಿಚಾರ; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ*

ಪ್ರಗತಿವಾಹಿನಿ ಸುದ್ದಿ: 5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

Home add -Advt

ರಾಜ್ಯದ ಪಠ್ಯಕ್ರಮ ಅನುಸರಿಸಿರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಸರ್ಕಾರದ ಆದೇಶವನ್ನು ಮಾರ್ಚ್ 22ರಂದು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿಹಿಡಿದಿತ್ತು. ಅಲ್ಲದೇ ಸ್ಥಗಿತಗೊಳಿಸಿದ್ದ ಪರೀಕ್ಷೆ ಮುಂದುವರೆಸಲು ಸೂಚನೆ ನೀಡಿತ್ತು. ಅದರಂತೆ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು.

ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಫಲಿತಾಂಶ ಪ್ರಕಟವಾಗುವ ಮುನ್ನ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೆಶಕ್ಕೆ ತಡೆಯಾಜ್ಞೆ ನೀಡಿದೆ. ಅಲ್ಲದೇ ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು, ಮುಂದಿನ ಆದೇಶದವರೆಗೂ ಕಾಯಬೇಕು ಎಂದು ಸೂಚಿಸಿದೆ.

Related Articles

Back to top button