ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನ ಬೆಳಗಾವಿ ಗ್ರಾಮೀಣ ವಲಯ ವ್ಯಾಪ್ತಿಯಲ್ಲಿ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಓದುತ್ತಿರುವ 1 ರಿಂದ 12 ನೇ ತರಗತಿಯ ಅಗತ್ಯತೆಯುಳ್ಳ ಮಕ್ಕಳಿಗೆ ಅ.22 ರಂದು ಬೆಳಗ್ಗೆ 9:30 ಗಂಟೆಗೆ ಕೆ.ಎಚ್ ಕಂಗ್ರಾಳಿಯ ಎಮ್.ಎಚ್.ಪಿ.ಎಸ್ ಶಾಲೆಯಲ್ಲಿ ವೈದ್ಯಕೀಯ ತಪಾಸಣಾ ಮೌಲ್ಯಾಂಕನ ಶಿಬಿರವನ್ನು ಆಯೋಜಿಸಲಾಗಿದೆ.
ಸದರಿ ಮೌಲ್ಯಾಂಕನ ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಆಧಾರ್, ಯು.ಡಿ.ಐ.ಡಿ, ಬಿ.ಪಿ.ಎಲ್ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರ, ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋ, ವಾರ್ಷಿಕ ಆದಾಯ ಪ್ರಮಾಣ ಪತ್ರ ಝರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಲು ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ