Kannada NewsLatest

ಹಲವು ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಭಾರಿ ಮಳೆ; ಬೆಳಗಾವಿಗೂ ತಟ್ಟಲಿದೆ ಅಸನಿ ಎಫೆಕ್ಟ್

ಪ್ರಗತಿವಾಹಿನಿ ಸುದ್ದಿ;  ಬೆಂಗಳೂರು: ಅಸನಿ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗ್ನೇಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದ್ದು, ಅಸನಿ ಚಂಡಮಾರುತ ಅಪ್ಪಳಿಸಲಿದೆ. ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾ 24ರವರೆಗೆ ಹೈ ಅಲರ್ಟ್ ಘೋಷಿಸಲಾಗಿದೆ.

Home add -Advt

ಮಾರ್ಚ್ 24 ಹಾಗೂ 25ರಂದು ಬೆಳಗಾವಿ, ರಾಯಚೂರು, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಚಿನ್ನಾಭರಣ ಖರೀದಿಸಲು ಇದು ಉತ್ತಮ ಸಮಯವೇ?

Related Articles

Back to top button