Kannada NewsKarnataka NewsLatest

*ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಶವ ಕೆರೆಯಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಇಲ್ಲಿನ ಸಿಂಗರಾಜಿಪುರ ಕೆರೆಯಲ್ಲಿ ಇಂದು ಬೆಳಿಗ್ಗೆ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಶವವಾಗಿ ಪತ್ತೆಯಾಗಿದ್ದಾಳೆ. ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ ರಾಮನಗರದ ಇನ್ಸ್ ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ನಿನ್ನೆ ಮಧ್ಯಾಹ್ನದಿಂದ ಕಾಣೆಯಾಗಿದ್ದ ವಿದ್ಯಾರ್ಥಿನಿ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಕಂಗಾಲಾದ ಪೋಷಕರು ಹುಡುಕಾಟ ನಡೆಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಹುಡುಕಾಟ ನಡೆಸಿದಾಗ ಸಿಂಗರಾಜಿಪುರ ಕೆರೆಯ ದಡದಲ್ಲಿ ವಿದ್ಯಾರ್ಥಿನಿಯ ಐಡಿ ಕಾರ್ಡ್, ಬ್ಯಾಗ್ ಪತ್ತೆಯಾಗಿದೆ. ಅನುಮಾನಗೊಂಡು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಶೋಧ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button