Kannada NewsLatestNational

*ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಮೂವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳದಲ್ಲಿ ಬರ್ದಮಾನ್ ಜಿಲ್ಲೆಯ ದುರ್ಗಾಪುರ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳ ವಿವರವನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಆದರೆ ಮೂವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಕಾಲೇಜು ಕ್ಯಾಂಪಸ್ ನಿಂದ ಎಳೆದೊಯ್ದು ದುರ್ಗಾಪುರ ಅರಣ್ಯ ಪ್ರದೇಶಕ್ಕೆ ಹೊತ್ತೊಯ್ದು ಆಕೆಯ ಮೇಲೆ ಸಾಮೂಹ್ಕ ಅತ್ಯಾಚಾರವೆಸಗಲಾಗಿತ್ತು. ಗಂಭೀರ ಸ್ಥಿತಿಯಲ್ಲಿರುವ ಸಂತ್ರಸ್ತೆಯನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂತ್ರಸ್ತೆ ಒಡಿಶಾ ಮೂಲದವಳಾಗಿದ್ದು, ವಿದ್ಯಾಭ್ಯಾಸಕ್ಕೆಂದು ದುರ್ಗಾಪುರ ಕಾಲೇಜಿನಲ್ಲಿ ಓದುತ್ತಿದ್ದಳು.

ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒಡಿಶಾ ಸಿಎಂ ಮೋಹನ್ ಚರಣ್ ಮಾಂಝಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಒತ್ತಾಯಿಸಿದ್ದಾರೆ.

Home add -Advt


Related Articles

Back to top button