
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಲಲಿತಾ (23) ಆತ್ಮಹತ್ಯೆಗೆ ಶರಣಾದ ಮೆಡಿಕಲ್ ವಿದ್ಯಾರ್ಥಿನಿ. ರಾಯಚೂರು ಮೂಲದ ಲಲಿತಾ, ಶಿವಮೊಗ್ಗ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದಳು.
ಕಾಲೇಜಿನ ಹಾಸ್ಟೇಲ್ ನಲ್ಲಿ ರಾತ್ರಿ 2 ಗಂಟೆವರೆಗೂ ಓದುತ್ತಿದ್ದ ಲಲಿತಾ ಬೆಳಗಾಗುವಷ್ಟರಲ್ಲಿ ನೇಣಿಗೆ ಶರಣಾಗಿದ್ದಾಳೆ. ಬೆಳಿಗ್ಗೆ ಎಷ್ಟು ಹೊತ್ತಾದರೂ ಆಕೆಯ ಕೊಠಡಿ ಬಾಗಿಲು ತೆಗೆಯದಿದ್ದಾಗ ಸಹಪಾಠಿಗಳು ಹಾಗು ವಾರ್ಡನ್ ಬಂದು ಬಾಗಿಲು ಒಡೆದಿದ್ದಾರೆ. ಲಲಿತಾ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಲಲಿತಾ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ