Latest

ಸಚಿವ ಶಿವರಾಮ ಹೆಬ್ಬಾರ ದಂಪತಿಗೂ ಕೊರೋನಾ ಪಾಸಿಟಿವ್

ಪ್ರಗತಿವಾಹಿನಿ ಸುದ್ದಿ, ಯಲ್ಲಾಪುರ :  ರಾಜ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಅವರ ಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಅವರಿಬ್ಬರೂ ಇಂದು ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಇಬ್ಬರ  ಪರೀಕ್ಷಾ ವರದಿಯೂ ಪಾಸಿಟಿವ್ ಬಂದಿದೆ. ಹೆಚ್ಚಿನ ಕೊರೋನಾ ಲಕ್ಷಣಗಳಿಲ್ಲದಿರುವುದರಿಂದ ಹೋಮ್ ಕ್ವಾರಂಟೈನ್ ಆಗುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಹಾಗಾಗಿ ಹೋಂ ಕ್ವಾರಂಟೈನ್ ಆಗುವುದಾಗಿ ಅವರು ತಿಳಿಸಿದ್ದಾರೆ.
ಈ ಕುರಿತು ಶಿವರಾಮ ಹೆಬ್ಬಾರ್ ಟ್ವೀಟ್ ಮಾಡಿದ್ದಾರೆ. ತಮ್ಮೊಂದಿಗೆ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆ ಮಾಡಿಕೊಳ್ಳುವಂತೆ  ವಿನಂತಿಸಿದ್ದಾರೆ.

Related Articles

Back to top button