ಪ್ರಗತಿವಾಹಿನಿ ಸುದ್ದಿ, ನವದೆಹಲಿ : ಏಪ್ರಿಲ್ 26 ಮತ್ತು ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಕರ್ನಾಟಕದ 28 ಸ್ಥಾನಗಳ ಪೈಕಿ ಉಳಿದಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳವಾರ ರಾತ್ರಿ ನವದೆಹಲಿಯಲ್ಲಿ ಸಭೆ ನಡೆಯಿತು.
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ