ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕ ಅನಿಲ ಬೆನಕೆ ಮಹಾನಗರ ಪಾಲಿಕೆಯಲ್ಲಿ ಇಂದು ಲೀಡ್ ಬ್ಯಾಂಕ್‌ನ ಜಿಲ್ಲಾ ಮುಖ್ಯ ವ್ಯವಸ್ಥಾಪಕರು ಹಾಗೂ ಬಿ.ಜೆ.ಪಿ ಕಾರ್ಯಕರ್ತರೊಂದಿಗೆ ಆತ್ಮ ನಿರ್ಭರ ಭಾರತ ನಿರ್ಮಾಣ ಕುರಿತು ಸವಿಸ್ಥಾರವಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಭಾರತ ದೇಶವನ್ನು ಆತ್ಮ ನಿರ್ಭರ ಭಾರತವನ್ನಾಗಿ ನಿರ್ಮಾಣ ಮಾಡುವ ಸಲುವಾಗಿ ಮುದ್ರಾ, ಎಮ್.ಎಸ್.ಎಮ್.ಇ, ಪಿ.ಎಮ್.ಇ.ಜಿ.ಪಿ, ಸ್ಟಾರ್ಟ ಆಪ್ ಇಂಡಿಯಾ, ಸ್ಟಾಂಡ್ ಆಪ್ ಇಂಡಿಯಾ, ಮೆಕ್ ಇನ್ ಇಂಡಿಯಾ ನಂತಹ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸರ್ಕಾರದ ಯೋಜನೆಗಳನ್ನು ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಆದ್ದರಿಂದ ಬೆಳಗಾವಿ ಜಿಲ್ಲೆಯ ಎಲ್ಲ ಬಿ.ಜೆ.ಪಿ ಕಾರ್ಯಕರ್ತರು ಇವುಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದರು.
ಇತ್ತಿಚೇಗೆ ಕೋರೋನಾ ರೋಗದಿಂದಾಗಿ ರಾಜ್ಯ ಹಾಗೂ ದೇಶದಲ್ಲಿ ಅನೇಕರು ತಮ್ಮ ಉದ್ಯೋಗವನ್ನು ಕಳೆದುಕೊಂಡು ನಿರುದ್ಯೋಗಿಗಳಾಗುತ್ತಿರುವುದರಿಂದ ಯುವಕರು ಸ್ವಯಂ ಉದ್ಯೋಗದ ಕಡೆ ಗಮನ ಹರಿಸಿಬೇಕು ಹಾಗೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಮಾಹಿತಿ ತಿಳಿಯಲು ಹಾಗೂ ಅರ್ಜಿ ಸಲ್ಲಿಸುವವರು ಸೂಕ್ತ ಮಾಹಿತಿಗಾಗಿ ನೇರವಾಗಿ ನನ್ನ ಕಾರ್ಯಾಲಯಕ್ಕೆ ಬಂದು ಸಂಪರ್ಕ ಮಾಡುವಂತೆ ತಿಳಿಸಿದರು.
ನಂತರ ಮಾತನಾಡಿದ ಶಾಸಕರು ದೇಶದಲ್ಲಿ ಪ್ರಧಾನ ಮಂತ್ರಿಗಳು ಈ ಮೊದಲು ಪ್ರಾರಂಭಿಸಿದ ಜನಧನ ಖಾತೆ (ಜಿರೋ ಅಕೌಂಟ್)ಯ ಉಪಯೋಗವನ್ನು ತೆಗೆದುಕೊಳ್ಳಬೇಕೆಂದ ಅವರು ರಾಜ್ಯದ ಜನತೆಯು ಸ್ವಾವಲಂಬಿಗಳಾಗಲು ಸ್ವಯಂ ಉದ್ಯೋಗವನ್ನು ನಡೆಸುವುದಕ್ಕೆ ರಾಜ್ಯ ಹಾಗೂ ಜಿಲ್ಲೆಯಲ್ಲಿನ ಎಲ್ಲ ಬ್ಯಾಂಕಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಲು ಬ್ಯಾಂಕುಗಳ ಆವರಣದಲ್ಲಿ ಬೋರ್ಡಗಳನ್ನು ಹಾಕಿ ಸಾರ್ವಜನಿಕರಿಗೆ ಸಹಕರಿಸಬೇಕು ಮತ್ತು ಬ್ಯಾಂಕುಗಳಲ್ಲಿ ಹೆಲ್ಪ್ ಡೆಸ್ಕ್ ತೆರೆಯುವಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಲೀಡ್ ಬ್ಯಾಂಕನ ಜಿಲ್ಲಾ ಮುಖ್ಯ ವ್ಯವಸ್ಥಾಪಕರಿಗೆ ತಿಳಿಸಿದರು ಹಾಗೂ ಭಾರತವನ್ನು ಆತ್ಮ ನಿರ್ಭರ ಭಾರತ ನಿರ್ಮಾಣಕ್ಕಾಗಿ ದೇಶದ ಎಲ್ಲ ಜನತೆಯು ಸಹಕರಿಸಬೇಕೆಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ