ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಕಾಂಗ್ರೆಸ್ ಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ತಡೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು. ಆದಾಗ್ಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಲ ನಾಯಕರೊಂದಿಗೆ ಪಾದಯಾತ್ರೆ ಮುಂದುವರೆಸಲು ಸಿದ್ಧತೆ ನಡೆಸಿದ್ದರು. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸುತ್ತಿದ್ದಾರೆ. ಆದರೆ ಈ ಮಧ್ಯೆ ಕಾಂಗ್ರೆಸ್ ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಎಐಸಿಸಿ ಯಿಂದ ಖಡಕ್ ಆದೇಶ ಹೊರಡಿಸಲಾಗಿದೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರಿಂದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಂದೇಶ ರವಾನಿಸಲಾಗಿದ್ದು, ಪಾದಯಾತ್ರೆಯನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ