Latest

ಪಾದಯಾತ್ರೆ ತಡೆಗೆ ಮುಂದಾದ ಸರ್ಕಾರ; ಒಬ್ಬನೇ ನಡೆಯುತ್ತೇನೆ ಎಂದ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪಾದಯಾತ್ರೆ ತಡೆಯಲು ಮುಂದಾಗಿದೆ.

ಕೋವಿಡ್ ಕೇಸ್ ಹೆಚ್ಚುತ್ತಿದ್ದರೂ ಕಾಂಗ್ರೆಸ್ ಪಾದಯಾತ್ರೆಗೆ ಬ್ರೇಕ್ ಹಾಕಿರದ ಬಗ್ಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಪರಾಕಿ ತೆಗೆದುಕೊಂಡ ಬೆನ್ನಲ್ಲೇ ನಿನ್ನೆ ಮಧ್ಯರಾತ್ರಿ ಪಾದಯಾತ್ರೆ ನಿಲ್ಲಿಸುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿದೆ. ಆದರೆ ನೋಟಿಸ್ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮನೆ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಕಾನೂನು ತಜ್ಞರ ಜತೆ ಚರ್ಚೆ ನಡೆಸಿದ್ದು, ಕನಿಷ್ಠ 5 ಜನರಾದರೂ ಪಾದಯಾತ್ರೆ ನಡೆಸಲು ಅವಕಾಶವಿರುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ರಾಜ್ಯ ಸರ್ಕಾರ ಪಾದಯಾತ್ರೆ ಹತ್ತಿಕ್ಕಲು ಮುಂದಾಗಿದೆ. ಒಂದು ವೇಳೆ ಪಾದಯಾತ್ರೆಗೆ ತಡೆ ನೀಡಲು ಸರ್ಕಾರ ಮುಂದಾದರೆ ನಾನೊಬ್ಬನೇ ನಡೆಯುತ್ತೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸ್ಫೋಟಕ್ಕೆ ತತ್ತರಿಸಿದ ದೇಶ; 2,47,417 ಜನರಲ್ಲಿ ಹೊಸದಾಗಿ ಸೋಂಕು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button