ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ನಿನ್ನೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಕೂಡ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಸಂಗಮದಲ್ಲಿ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವೇದಿಕೆ ಮೇಲೆ ಪಾಲ್ಗೊಂಡಿದ್ದ 30 ಕಾಂಗ್ರೆಸ್ ನಾಯಕರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಐಪಿಸಿ ಸೆಕ್ಷನ್ 141, 143, 290, 336 ಅಡಿ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲು ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ನಿಯಮ ಉಲ್ಲಂಘಿಸಿದ ಎಲ್ಲರ ಮೇಲೂ ಕೇಸ್ ದಾಖಲಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ನಿಯಮ ಜಾರಿಗೆ ತಂದಿದ್ದರೂ ವಿಪಕ್ಷ ನಾಯಕರು ನಿಯಮ ಉಲ್ಲಂಘಿಸಿ ಪಾದಯಾತ್ರೆ ಆಯೋಜಿಸಿದ್ದಾರೆ. ಹಾಗಾಗಿ ಕಾನೂನಿನನಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಅವರು ಎಷ್ಟೇ ದೊಡ್ಡ ಲೀಡರ್ ಆಗಿರಲಿ, ಸಾಮಾನ್ಯ ಜನರೇ ಆಗಿರಲಿ, ಯಾವುದೇ ಭೇದಭಾವ ಇಲ್ಲ, ಕಾನೂನು ಎಲ್ಲರಿಗೂ ಒಂದೇ. ವಿಪಕ್ಷ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವೀಕೆಂಡ್ ಕರ್ಫ್ಯೂ ಬೆನ್ನಲ್ಲೇ ಚಿನ್ನಾಭರಣಗಳ ದರ ಹೇಗಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ