Latest

ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ; ನಗಾರಿ ಬಾರಿಸಿ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ಪ್ರಗತಿವಾಹಿನಿ ಸುದ್ದಿ; ರಾಮನಗರ: ಕುಡಿಯುವ ನೀರಿಗಾಗಿ ಆಗ್ರಹಿಸಿ ಕಾಂಗ್ರೆಸ್ ಕರೆ ನೀಡಿರುವ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಹಿರೀಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ರಾಮನಗರ ಜಿಲ್ಲೆಯ ಮೇಕೆದಾಟು ಬಳಿಯ ಸಂಗಮ ಕ್ಷೇತ್ರದಲ್ಲಿ ಸ್ವಾಮೀಜಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಿಡಗಳಿಗೆ ನೀರು ಹಾಕಿದರು. ಬಳಿಕ ವೇದಿಕೆಯ ಬಳಿಯಿದ್ದ ಬೃಹತ್ ನಗಾರಿ ಬಾರಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಪಾದಯಾತ್ರೆಗೆ ಅಧಿಕೃತ ಚಾಲನೆ ನೀಡಿದರು.

ಎರಡು ತಿಂಗಳ ಹಿಂದೆಯೇ ನಾವು ಪಾದಯಾತ್ರೆ ಘೋಷಣೆ ಮಾಡಿದ್ದೆವು. ಆದರೆ ನಾವು ಘೋಷಣೆ ಮಾಡುತ್ತಿದ್ದಂತೆ ರಾಜ್ಯ ಬಿಜೆಪಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿ ನಮ್ಮ ಪಾದಯಾತ್ರೆ ತಡೆಯಲು ಯತ್ನಿಸುತ್ತಿದೆ. ಹೇಗಾದರೂ ಮಾಡಿ ಮೇಕೆದಾಟು ಯೋಜನೆಯ ಪಾದಯಾತ್ರೆ ತಡೆಯಬೇಕು ಎಂಬುದೇ ಅವರ ಉದ್ದೇಶ. ಆದರೆ ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ. ನಾವು ಕಾನೂನು ಉಲ್ಲಂಘನೆ ಮಾಡಿ ಹೋರಾಟ ಮಾಡುತ್ತಿಲ್ಲ. ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ. ಕುಡಿಯುವ ನೀರಿಗಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಗುಡುಗಿದರು.

ಮೇಕೆದಾಟು ಯೋಜನೆ ಆರಂಭವಾಗಿದ್ದೇ ನಮ್ಮ ಕಾಲದಲ್ಲಿ. ಬಿಜೆಪಿಯ ಹಲವರು ಸಿಎಂ ಆದರೂ ಯಾರೊಬ್ಬರೂ ಯೋಜನೆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಆದರೆ ಈಗ ಸಚಿವ ಕಾರಜೋಳ ಅವರು ಪತ್ರಿಕೆಯಲ್ಲಿ ದಿನಕ್ಕೊಂದು ಜಾಹೀರಾತು ನೀಡುವ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡಿ, ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಗಂಗಾ ಪೂಜೆ ನೆರವೇರಿಸಿದ ಡಿ.ಕೆ.ಶಿವಕುಮಾರ್; ಮೇಕೆದಾಟು ಪಾದಯಾತ್ರೆ ಆರಂಭ; ಚಿತ್ರರಂಗದ ಗಣ್ಯರೂ ಭಾಗಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button