ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ನೀರಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶುಭ ಮುಹೂರ್ತ ನಿಗದಿ ಮಾಡಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆಗೆ ಡಿ.ಕೆ.ಶಿವಕುಮಾರ್ ಜ್ಯೋತಿಷಿಗಳ ಮೂಲಕ ಮುಹೂರ್ತ ಫಿಕ್ಸ್ ಮಾಡಿದ್ದು, ನಾಳೆ ಬೆಳಿಗ್ಗೆ 8:50ಕ್ಕೆ ಪಾದಯಾತ್ರೆ ಮುಹೂರ್ತ ನಿಗದಿಯಾಗಿದೆ. ಮಕರ ಲಗ್ನ, ರೇವತಿ ನಕ್ಷತ್ರ, ಮೀನ ರಾಶಿಗೆ ಅನುಗುಣವಾಗಿ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತಿದ್ದು, ಗಂಗಾ ಪೂಜೆ ಬಳಿಕ ಮೇಕೆದಾಟುವಿನಿಂದ ಬೆಂಗಳೂರಿನತ್ತ ಪಾದಯಾತ್ರೆ ಆರಂಭವಾಗಲಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ರಾಶಿ-ನಕ್ಷತ್ರಕ್ಕೆ ಅನುಗುಣವಾಗಿ ಕಾಂಗ್ರೆಸ್ ಪಾದಯಾತ್ರೆಗೆ ಮುಹೂರ್ತ ನಿಗದಿಪಡಿಸಿದ್ದು, ಈ ಮೂಲಕ ಕಾಂಗ್ರೆಸ್ ಹಾಗೂ ಡಿಕೆಶಿ ಅವರ ವರ್ಚಸ್ಸು ಹೆಚ್ಚಲಿದೆ ಎಂದು ಜೋತಿಷಿಗಳು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಾರೆ ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳು, ನೀರಾವರಿ ಯೋಜನೆ ಹೆಸರಲ್ಲಿ ಹೋರಾಟದ ಮೂಲಕ ಮತದಾರರನ್ನು ಸೆಳೆಯಲು ಸಜ್ಜಾಗಿವೆ.
ಗೋವಿಂದ ಕಾರಜೋಳ ಓರ್ವ ಮೂರ್ಖ ಮಂತ್ರಿ; ಎಂ.ಬಿ.ಪಾಟೀಲ್ ವಾಗ್ದಾಳಿ
ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ